ಭವಿಷ್ಯತ್ತಿನ ಯೋಜನೆಗಳು
ಡಾ. ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಪ್ರಕಟಣ ಯೋಜನೆ
ಡಾ. ಎಂ.ಎಂ. ಕಲಬುರ್ಗಿಯವರು ಸಾಹಿತ್ಯದ ಮೂಲಕ ನಾಡು, ನುಡಿ ಸೇವೆಗೈದು ದೇಶ-ವಿದೇಶದಲ್ಲಿ ದಟ್ಟವಾದ ಪ್ರಭಾವವನ್ನು ಬೀರಿದ ವ್ಯಕ್ತಿ. 20ನೇ ಶತಮಾನದ ಉತ್ತರಾರ್ಧದಲ್ಲಿ 21ನೇ ಶತಮಾನದ ಪೂರ್ವಾರ್ಧದ ಹೊಸ್ತಿಲಲ್ಲಿ ನಿಂತ ಮಹಾನ್ ವಿದ್ವಾಂಸ. ಸಂಶೋಧಕ, ವಿಮರ್ಶಕ, ಚಿಂತಕ ಹಾಗೂ ಸಾಹಿತ್ಯದ ಆರಾಧಕ.
ಇಂತಹ ಅಪರೂಪದ ವ್ಯಕ್ತಿಯ ವ್ಯಕ್ತಿತ್ವದ ಬಹುಮುಖಗಳನ್ನು ಒಂದೆಡೆ ಸೇರಿಸಿ ಇಡಿಯಾಗಿ ಸಮಗ್ರ ವ್ಯಕ್ತಿತ್ವವನ್ನು ಅಕ್ಷರ, ದೃಶ್ಯ, ಧ್ವನಿ, ಚಿತ್ರ ಮಾಧ್ಯಮಗಳ ಮೂಲಕ ಪರಿಚಯಿಸುವುದು. ಅಕ್ಷರ ಮಾಧ್ಯಮದಲ್ಲಿ ಬಂದ ಅವರ ಸಮಗ್ರ ಸಾಹಿತ್ಯವನ್ನು ವಿಷಯವಾರು ವಿಂಗಡಿಸಿ ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆಯನ್ನು ಕೇಂದ್ರ ಹಮ್ಮಿಕೊಂಡಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನ ನೀಡಿದೆ. ಕಾರ್ಯ ಪ್ರಗತಿಯಲ್ಲಿದೆ.
ಡಾ. ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ವಿಸ್ತೀರ್ಣ ಕಟ್ಟಡ
ಕೇಂದ್ರದ ಬೆಳವಣಿಗೆ ದಿನೇದಿನೇ ಹೆಚ್ಚುತ್ತಿರುವುದರಿಂದ ಸ್ಮಾರಕ ಭವನದ ವಿಸ್ತೀರ್ಣ ಕಟ್ಟಡವನ್ನು ನಿರ್ಮಿಸಲಾಗಿದೆ. ಇದಕ್ಕೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೆರವು ನೀಡಿದೆ. ಕಟ್ಟಡ ಪೂರ್ತಿಯಾಗಿದೆ. ಈ ಕಟ್ಟಡ ಸಂಶೋಧನ ಕೇಂದ್ರವಾಗಿ ಚಟುವಟಿಕೆಗಳನ್ನು ಮಾಡುತ್ತಿದೆ. ಮೊದಲಿನ ಕಟ್ಟಡ ಸ್ಮಾರಕ ಭವನವಾಗಿ ಡಾ. ಫ.ಗು. ಹಳಕಟ್ಟಿಯವರ ವಸ್ತು ಸಂಗ್ರಹಾಲಯವಾಗಿ ಪರಿವರ್ತಿತವಾಗುತ್ತಿದೆ.